ಬೆಂಗಳೂರು: ನೆಲಮಂಗಲದಲ್ಲಿ ಇಬ್ಬರು ನಟೋರಿಯಸ್ ಕಳ್ಳರನ್ನು ಬಂಧಿಸಲಾಗಿದೆ. ನೆಲಮಂಗಲ ಟೌನ್ ಪೋಲಿಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್ ಮತ್ತು ಯತೀಶ್ ಅವರನ್ನು ಬಂಧಿಸಲಾಗಿದೆ. ನೆಲಮಂಗಲದ ಇಂಜಿನಿಯರ್ ಮನೆಯೊಂದರಲ್ಲಿ ಕಳ್ಳತನ ನಡೆಸಿದ್ದರು. 56 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣಗಳನ್ನು ಖತರ್ನಾಕ್ ಕಳ್ಳರು ದೋಚಿದ್ದರು.
ಆರೋಪಿಗಳು 1/2 ಕೆಜಿಗೂ ಹೆಚ್ಚು ಚಿನ್ನಾಭರಣ ದೋಚಿ ಪರಾರಿಯಾಗಿದ್ದು, ಬಂಧಿತರಿಂದ 343 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು 25- 26 ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ತನಿಖೆ ಮುಂದುವರೆದಿದೆ.