ಮಡಿಕೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರಲ್ಲಿ ಮುಳುಗಿ ಸಾವು ಕಂಡ ಘಟನೆ ಬಾಳೆಲೆ ಗ್ರಾಮದ ಕೆರೆಯಲ್ಲಿ ನಡೆದಿದೆ.
ಕೃಷ್ಣ(11), ಗೌತಮ್(21) ಮೃತಪಟ್ಟವರು ಎಂದು ಹೇಳಲಾಗಿದೆ. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮ ಕೆರೆಯಲ್ಲಿ ಘಟನೆ ನಡೆದಿದೆ. ಕೆರೆಯಲ್ಲಿ ಈಜುವಾಗ ನೀರಲ್ಲಿ ಮುಳುಗಿ ಇಬ್ಬರೂ ಮೃತಪಟ್ಟಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ.

