ಚಿಕ್ಕಬಳ್ಳಾಪುರ: ಲಾರಿಗೆ ಎಪಿಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಪೇರೆಸಂದ್ರ ಸಮೀಪ ಅಪಘಾತ ನಡೆದಿದೆ.
ಮುಂದೆ ಹೋಗುತ್ತಿದ್ದ ಲಾರಿಗೆ ಎಪಿಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಆಂಧ್ರ ಸಾರಿಗೆ ಬಸ್ ಚಾಲಕ ಮತ್ತು ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ 23 ಪ್ರಯಾಣಿಕರ ಪೈಕಿ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಂಧ್ರ ಸಾರಿಗೆ ಬಸ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ. ಪೇರೆಸಂದ್ರ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಪೇರೆಸಂದ್ರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

