ಹಾವೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ಹೊರವಲಯದಲ್ಲಿ ನಡೆದಿದೆ.
ತರುಣ್(13), ಮಧು(19) ಮೃತಪಟ್ಟವರು ಎಂದು ಹೇಳಲಾಗಿದೆ. ಮತ್ತೊಬ್ಬ ಸವಾರ ಸಂತೋಷ್(41) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಗಾಯಗೊಂಡ ಸಂತೋಷ್ ನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

