ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.
ಬೆಂಗಳೂರು –ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರ ಹೊನ್ನೇನಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಬೋದಗಾನಹಳ್ಳಿ ನಿವಾಸಿ ವರುಣ್, ಕುಣಿಗಲ್ ಮೂಲದ ಜೀವನ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊನ್ನೇನಹಳ್ಲಿ ಗೇಟ್ ಬಳಿ ಪದೇಪದೇ ಅಪಘಾತಗಳು ನಡೆಯುತ್ತಿವೆ. ಅಪಘಾತಗಳ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

