ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹೊನ್ನೇನಹಳ್ಳಿ ಸಮೀಪ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.
ಹೊನ್ನೇನಹಳ್ಳಿ ಲೋಕೇಶ್(25), ಚಿಕ್ಕಮಗಳೂರು ಜಿಲ್ಲೆ ರಾಮೇನಹಳ್ಳಿಯ ಕಿರಣ್(32) ಮೃತಪಟ್ಟವರು ಎಂದು ಹೇಳಲಾಗಿದೆ. ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಇಬ್ಬರೂ ಸವಾರರು ಮೃತಪಟ್ಟಿದ್ದಾರೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
