ಚಿತ್ರದುರ್ಗ: ಚಿತ್ರದುರ್ಗದ ಜಾನಕೊಂಡ ಸಮೀಪ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಜಾನಕೊಂಡ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.
ಅಪರಿಚಿತ ಲಾರಿ ಡಿಕ್ಕಿ ಹೊಡೆದು ಇಬ್ಬರು ಕುರಿಗಾಹಿಗಳು ಸಾವನ್ನಪ್ಪಿದ್ದಾರೆ. ಕುರಿಗಾಹಿಗಳಾದ ಕಿರಣ್ ಮತ್ತು ಸಣ್ಣ ಬೋರಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 14ಕ್ಕೂ ಹೆಚ್ಚು ಕುರಿಗಳು ಕೂಡ ಸ್ಥಳದಲ್ಲಿಯೇ ಸಾವನ್ನಪ್ಪಿವೆ.
ಅಪಘಾತದ ನಂತರ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸಿಬಿಐ ಬಾಲಚಂದ್ರ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

