ರಾಮನಗರ: ಅವ್ವೇರಹಳ್ಳಿ ಗ್ರಾಮದ ಬಳಿ ಇರುವ ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ನಿಶಾಂತ್ ಮತ್ತು ಸಿದ್ದಾರ್ಥ ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಅವ್ವೇರಹಳ್ಳಿ ಗ್ರಾಮದ ಕೆರೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಇವರು ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ನಿಶಾಂತ್ ಮೃತದೇಹ ಪತ್ತೆಯಾಗಿದ್ದು, ಸಿದ್ದಾರ್ಥ ಶವಕ್ಕಾಗಿ ಶೋಧ ಕಾರ್ಯ ನಡೆಸಲಾಗಿದೆ. ಆರು ಜನ ಸ್ನೇಹಿತರು ರೆಸಾರ್ಟ್ ಗೆ ಬಂದಿದ್ದ ವೇಳೆ ದುರಂತ ಸಂಭವಿಸಿದೆ.
ಕೆರೆಯ ವೀಕ್ಷಣೆಗೆ ತೆರಳಿದ್ದ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.