ಬೆಂಗಳೂರು: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಹಾರೋಹಳ್ಳಿ ಹೊರವಲಯದಲ್ಲಿ ಘಟನೆ ನಡೆದಿದೆ.
ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ದರ್ಶನ್(19), ಹರ್ಷಿತ್(19) ಮೃತಪಟ್ಟವರು. ಮೃತರು ದಯಾನಂದ ಸಾಗರ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ಅಪಘಾತದಲ್ಲಿ ರವೀಶ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.