ಬೆಳಗಾವಿ: ಸುಳೆಗಾಳಿ ಸಮೀಪ ವಿದ್ಯುತ್ ಪ್ರವಹಿಸಿ ಎರಡು ಕಾಡಾನೆಗಳು ಸಾವನ್ನಪ್ಪಿವೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದ ಸಮೀಪ ಘಟನೆ ನಡೆದಿದೆ.
ಜಮೀನಿಗೆ ವಿದ್ಯುತ್ ತಂತಿ ಬೇಲಿಯನ್ನು ರೈತರು ಅಳವಡಿಸಿದ್ದರು. ಈ ವೇಳೆ ಜಮೀನಿಗೆ ಹೋಗುವಾಗ ಕರೆಂಟ್ ಶಾಕ್ ಹೊಡೆದಿದೆ. ವಿದ್ಯುತ್ ಪ್ರವಹಿಸಿ ಜಮೀನಿನಲ್ಲಿ ಎರಡು ಆನೆಗಳು ಮೃತಪಟ್ಟಿವೆ. ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
