HomeLatest NewsBREAKING: ಹಳೆ ಮನೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

BREAKING: ಹಳೆ ಮನೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

ಗದಗ: ಮನೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.

ನಾಗಪ್ಪ ದೊಡ್ಡಮನಿ(60), ಶೇಖಪ್ಪ ಪರಸಪ್ಪನವರ(55) ಮೃತಪಟ್ಟವರು ಎಂದು ಹೇಳಲಾಗಿದೆ. ಯಲ್ಲಪ್ಪ ಕೆಳಗೇರಿ ಅವರ ಹಳೆ ಮನೆ ಗೋಡೆ ತೆರವುಗೊಳಿಸುವಾಗ ಘಟನೆ ನಡೆದಿದೆ. ಅವಶೇಷಗಳಡಿ ಸಿಲುಕಿ ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಪ್ರಾಣ ಬಿಟ್ಟಿದ್ದಾರೆ. ಮತ್ತಿಬ್ಬರು ಕಾರ್ಮಿಕರನ್ನು ರಕ್ಷಿಸಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ನರಗುಂದ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular