BREAKING : ಉಡುಪಿ ಕೊಲೆ ಪ್ರಕರಣ : ಆರೋಪಿಯನ್ನು ಒಪ್ಪಿಸುವಂತೆ ಸ್ಥಳೀಯರ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಉಡುಪಿ : ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಒಪ್ಪಿಸುವಂತೆ ಸ್ಥಳೀಯರು ಗಲಾಟೆ ಮಾಡಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಉಡುಪಿ ಜಿಲ್ಲೆಯ ತೃಪ್ತಿ ನಗರದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಸ್ಥಳ ಮಹಜರು ನಡೆಸಲು ಇಂದು ನಗರದ ತೃಪ್ತಿ ನಿವಾಸಕ್ಕೆ ಕರೆ ತಂದಿದ್ದರು. ಈ ವೇಳೆ ಸ್ಥಳೀಯರು ಆರೋಪಿ ಪ್ರವೀಣ್ ಚೌಗಲೆಯನ್ನು ತಮಗೆ ಒಪ್ಪಿಸುವಂತೆ ಗಲಾಟೆ ಮಾಡಿದ್ದಾರೆ.

ಆರೋಪಿ ಪ್ರವೀಣ್ ನನ್ನು ನಮಗೆ ನೀಡಿ ನಾವು ಶಿಕ್ಷೆ ಕೊಡುತ್ತೇವೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ನಂತರ ಸ್ಥಳೀಯರು ಪೊಲೀಸ್ ಜೀಪ್ ಸುತ್ತುವರೆದಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಲಾಠಿ ಚಾರ್ಜ್ ನಡೆಸಿ ಜನರನ್ನು ಚದುರಿಸಿದ್ದಾರೆ.

ಆಯ್ನಾಸ್ ಟಾರ್ಗೆಟ್ ಮಾಡಿ ಪ್ರವೀಣ್ ಕೊಲೆ ಮಾಡಿದ್ದಾನೆ. ಇಬ್ಬರೂ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದರು. ಆಯ್ನಾಸ್ ಗಗನಸಖಿಯಾಗಿದ್ದು, ಪ್ರವೀಣ್ ಕ್ಯಾಬಿನ್ ಕ್ರೂ ಆಗಿದ್ದರು. ಪರಸ್ಪರ ದ್ವೇಷ ಅಥವಾ ಏಕಮುಖ ಪ್ರೀತಿಯಿಂದ ಕೃತ್ಯವೆಸಗಿರುವ ಸಾಧ್ಯತೆ ಇದೆ.ನಾಲ್ವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಪ್ರವೀಣ್ ಚೌಗಲೆ ನಿನ್ನೆ ಬಂಧಿತನಾಗಿದ್ದಾನೆ. ಉಡುಪಿ ಜಿಲ್ಲೆಯ ನೇಜಾರಿನ ತೃಪ್ತಿ ನಗರದಲ್ಲಿ ಭಾನುವಾರ ನಾಲ್ವರನ್ನು ಹತ್ಯೆ ಮಾಡಲಾಗಿತ್ತು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read