ಬೆಂಗಳೂರು: ಪತಿ, ಇಬ್ಬರು ಮಕ್ಕಳನ್ನು ಕೊಂದು ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ.
ಪತಿ ಶಿವು(32), ಮಕ್ಕಳಾದ ಚಂದ್ರಕಲಾ(11), ಉದಯ ಸೂರ್ಯ(7) ಅವರನ್ನು ಕೊಲೆ ಮಾಡಿದ ಪತ್ನಿ ಮಂಜುಳಾ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವು ಅಪಘಾತದಲ್ಲಿ ಗಾಯಗೊಂಡ ಕಾರಣ ಚಿಕಿತ್ಸೆಗೆ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಸಂಕಷ್ಟವಾಗಿದ್ದು, ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಅವರನ್ನು ಕೂಡ ಸಾಯಿಸಲು ದಂಪತಿ ನಿರ್ಧರಿಸಿದ್ದರು. ಪತಿ, ಮಕ್ಕಳಿಗೆ ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದ ಮಂಜುಳಾ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಗ್ಗ ತುಂಡಾದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಸ್ವಸ್ಥಗೊಂಡ ಮಂಜುಳಾ ಅವರನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.