HomeLive NewsBREAKING: ಸಾಲ ತೀರಿಸಲಾಗದೇ ಕುತ್ತಿಗೆ ಬಿಗಿದು ಪತಿ, ಇಬ್ಬರು ಮಕ್ಕಳನ್ನು ಕೊಂದು ಪತ್ನಿ ಆತ್ಮಹತ್ಯೆ ಯತ್ನ

BREAKING: ಸಾಲ ತೀರಿಸಲಾಗದೇ ಕುತ್ತಿಗೆ ಬಿಗಿದು ಪತಿ, ಇಬ್ಬರು ಮಕ್ಕಳನ್ನು ಕೊಂದು ಪತ್ನಿ ಆತ್ಮಹತ್ಯೆ ಯತ್ನ

ಬೆಂಗಳೂರು: ಪತಿ, ಇಬ್ಬರು ಮಕ್ಕಳನ್ನು ಕೊಂದು ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ.

ಪತಿ ಶಿವು(32), ಮಕ್ಕಳಾದ ಚಂದ್ರಕಲಾ(11), ಉದಯ ಸೂರ್ಯ(7) ಅವರನ್ನು ಕೊಲೆ ಮಾಡಿದ ಪತ್ನಿ ಮಂಜುಳಾ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವು ಅಪಘಾತದಲ್ಲಿ ಗಾಯಗೊಂಡ ಕಾರಣ ಚಿಕಿತ್ಸೆಗೆ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಸಂಕಷ್ಟವಾಗಿದ್ದು, ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಅವರನ್ನು ಕೂಡ ಸಾಯಿಸಲು ದಂಪತಿ ನಿರ್ಧರಿಸಿದ್ದರು. ಪತಿ, ಮಕ್ಕಳಿಗೆ ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದ ಮಂಜುಳಾ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಗ್ಗ ತುಂಡಾದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಸ್ವಸ್ಥಗೊಂಡ ಮಂಜುಳಾ ಅವರನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular