HomeIndiaBREAKING : 'ಒಂದು ದೇಶ, ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ |One Nation,...

BREAKING : ‘ಒಂದು ದೇಶ, ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ |One Nation, One Election

ನವದೆಹಲಿ : ‘ಒಂದು ದೇಶ ಒಂದು ಚುನಾವಣೆ’ ( One Nation, One Election)  ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್    ನೇತೃತ್ವದ ಒಂದು ದೇಶ ಒಂದು ಚುನಾವಣೆ’ ವರದಿಗೆ ಅನುಮೋದನೆ ನೀಡಿದೆ.

ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾಗಿತ್ತು.
8,626 ಪುಟಗಳ ಈ ವರದಿಯನ್ನು ಸಲ್ಲಿಕೆ ಮಾಡಲಾಗಿದ್ದು, ಸಮಿತಿಯು ಸುಮಾರು ಏಳು ತಿಂಗಳ ಕಠಿಣ ಸಮಾಲೋಚನೆ ಮತ್ತು ಸಂಶೋಧನೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ . ಈ ಸಮಿತಿಯ ಇತರ ಸದಸ್ಯರು:
• ಅಮಿತ್ ಶಾ , ಕೇಂದ್ರ ಗೃಹ ಸಚಿವ
• ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ
• ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್
• 15ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್ಕೆ ಸಿಂಗ್
• ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ ಸುಭಾಷ್ ಸಿ ಕಶ್ಯಪ್
• ಹಿರಿಯ ವಕೀಲ ಹರೀಶ್ ಸಾಳ್ವೆ
• ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular