ಬೆಂಗಳೂರು : ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅಮಿತ್ ಶಾ ಅವರನ್ನು ಸನ್ಮಾನಿಸಿದರು.
ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನಿನ್ನೆ ತಡರಾತ್ರಿ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದರು.

