ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಬಳಕೆ ನಿಷೇಧಗೊಳಿಸಲಾಗಿದೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದಲ್ಲಿ ಗುಟ್ಕಾ, ಪಾನ್ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ಬಳಕೆ ಕೂಡ ನಿಷೇಧಿಸಲಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಬಳಕೆ ನಿಷೇಧಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ತಾಯಿ, ಶಕ್ತಿ ದೇವತೆ ಚಾಮುಂಡಿ ದೇವಿಯ ಬಗ್ಗೆ ಕೋಟ್ಯಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು. ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಬೇಡಿಕೆ ಇದೆ. ಈ ಬಗ್ಗೆಯೂ ಮುಂದುವರೆಯುವ ಅಗತ್ಯವಿದೆ ಎಂದು ಹೇಳಿದರು.
https://twitter.com/siddaramaiah/status/1830881878674427956?ref_src=twsrc%5Egoogle%7Ctwcamp%5Eserp%7Ctwgr%5Etweet