ಉತ್ತರಾಖಂಡದ ಹಲ್ದ್ವಾನಿಯಲ್ಲಿ ಗುರುವಾರ ಅಕ್ರಮ ಮದರಸಾ ನೆಲಸಮಗೊಳಿಸುವ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಇದುವರೆಗೆ ಐವರು ಸಾವನ್ನಪ್ಪಿದ್ದಾರೆ ಮತ್ತು 100 ಪೊಲೀಸರು ಗಾಯಗೊಂಡಿದ್ದಾರೆ ಎಂದು ರಾಜ್ಯ ಎಡಿಜಿ ಕಾನೂನು ಮತ್ತು ಸುವ್ಯವಸ್ಥೆ ಎಪಿ ಅಂಶುಮಾನ್ ತಿಳಿಸಿದ್ದಾರೆ.
ಹಲ್ದ್ವಾನಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಶುಕ್ರವಾರ “ಪೊಲೀಸ್ ಠಾಣೆಯೊಳಗೆ ಸಿಕ್ಕಿಬಿದ್ದ ಪೊಲೀಸ್ ಸಿಬ್ಬಂದಿಯನ್ನು ಜೀವಂತವಾಗಿ ಸುಡಲು” ಗುಂಪು ಪ್ರಯತ್ನಿಸಿದೆ ಎಂದು ಹೇಳಿದರು . ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕರ್ಫ್ಯೂ ವಿಧಿಸಲು ಮತ್ತು ಅರೆಸೈನಿಕ ಪಡೆಗಳನ್ನು ನಿಯೋಜಿಸಲಾಗಿದೆ. ಸದ್ಯ ಉತ್ತರಾಖಂಡದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತೆರಳಿದ್ದು, ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
#WATCH | Uttarakhand | Violence broke out in Banbhoolpura, Haldwani following an anti-encroachment drive today. DM Nainital has imposed curfew in Banbhoolpura and ordered a shoot-on-sight order for rioters. Details awaited. pic.twitter.com/Qykla7UO65
— ANI (@ANI) February 8, 2024