HomeKarnatakaBREAKING : ವಾಲ್ಮೀಕಿ ನಿಗಮದ ಹಗರಣ ಕೇಸ್ ; ಮಾಜಿ ಸಚಿವ ಬಿ. ನಾಗೇಂದ್ರ ಪತ್ನಿ...

BREAKING : ವಾಲ್ಮೀಕಿ ನಿಗಮದ ಹಗರಣ ಕೇಸ್ ; ಮಾಜಿ ಸಚಿವ ಬಿ. ನಾಗೇಂದ್ರ ಪತ್ನಿ E.D ವಶಕ್ಕೆ..!

ಬೆಂಗಳೂರು : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಪತ್ನಿ ಮಂಜುಳಾರನ್ನು ಇ.ಡಿ ವಶಕ್ಕೆ ಪಡೆದುಕೊಂಡಿದೆ.

ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. . ನಾಗೇಂದ್ರ ಅವರ ನಿವಾಸಕ್ಕೆ ವಶಕ್ಕೆ ಪಡೆದಿರುವ ಇ.ಡಿ ಅಧಿಕಾರಿಗಳು ಶಾಂತಿನಗರದ ಇಡಿ ಕಚೇರಿಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗುತ್ತಿದ್ದು, ಶಾಸಕ ದದ್ದಲ್ ಹಾಗೂ ಪಂಪಣ್ಣ ಅವರನ್ನು ಕೂಡ ವಿಚಾರಣೆ ನಡೆಸಲಾಗಿದೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಬಿ. ನಾಗೇಂದ್ರ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular