ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(KSCA) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿರೋಧಿ ಬಣದ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿದ್ದ ಕೆ.ಎನ್. ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತವಾಗಿದೆ. ಅವರ ನಾಮಪತ್ರ ತಿರಸ್ಕೃತವಾಗುವುದರೊಂದಿಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಿಸೆಂಬರ್ 7ರಂದು ನಿಗದಿಯಂತೆಯೇ ಕೆ.ಎಸ್.ಸಿ.ಎ.ಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು.
ಬ್ರಿಜೇಶ್ ಪಟೇಲ್ ಬಣದಿಂದ ಅಧ್ಯಕ್ಷ ಸ್ಥಾನಕ್ಕೆ ಶಾಂತಕುಮಾರ್ ಅವರನ್ನು ಕಣಕ್ಕಿಳಿಸಲಾಗಿತ್ತು. ದಿಗ್ಗಜ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್ ಬೆಂಬಲ ನೀಡಿರುವುದಾಗಿ ವೆಂಕಟೇಶ್ ಪ್ರಸಾದ್ ತಂಡ ಹೇಳಿಕೊಂಡಿತ್ತು.
