ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ‘ಬ್ಯಾಂಕ್ ಜನಾರ್ಧನ್’ ನಿಧನರಾಗಿದ್ದು, ಇಂದು ಬೆಳಗ್ಗೆ 10:30 ರಿಂದ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಸುಲ್ತಾನ್ ಪಾಳ್ಯದಲ್ಲಿರುವ ಅವರ ನಿವಾಸದಲ್ಲಿ ಇಂದು ಬೆಳಗ್ಗೆ 10 : 30 ರಿಂದ ಸಂಜೆ 4:30 ರವರೆಗೆ ‘ಬ್ಯಾಂಕ್ ಜನಾರ್ಧನ್’ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬ್ಯಾಂಕ್ ಜನಾರ್ಧನ್’ ನಿಧನಕ್ಕೆ ಹಲವಾರು ನಟರು ಸಂತಾಪ ಸೂಚಿಸಿದ್ದಾರೆ.
ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್(76) ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ರಾತ್ರಿ 2.30ಕ್ಕೆ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ.
1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ಕನ್ನಡ ಚಿತ್ರರಂಗದ ಹಿರಿಯ ನಟ. ಬೆಂಗಳೂರಿನಲ್ಲಿಯೇ. ತಮ್ಮ ಶಿಕ್ಷಣ ಪೂರ್ಣಗೊಳಿಸಿದ್ದಾರೆ. 1991ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಈವೆರೆಗೂ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆ ಮತ್ತು ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ, ಹಾಸ್ಯ ನಟರಾಗಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ.
ಉಪೇಂದ್ರ ನಿರ್ದೇಶನದ ‘ಶ್’, ‘ತರ್ಲೆ ನನ್ ಮಗ’ ಹಾಗೂ ‘ಕೌರವ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಗಮನ ಸೆಳೆದಿದ್ದಾರೆ. ಪಾಪಪಾಂಡು, ಮಾಂಗಲ್ಯ, ರೋಬೋ ಫ್ಯಾಮಿಲಿ, ಜೋಕಾಲಿ ಧಾರಾವಾಹಿಗಳಲ್ಲೂ ನಟಿಸಿದ್ದಾರೆ.