BREAKING : ಹಿರಿಯ ನಟಿ ಬಿ. ಸರೋಜಾದೇವಿ ನಿಧನಕ್ಕೆ CM ಸಿದ್ದರಾಮಯ್ಯ, DCM ಡಿ.ಕೆ ಶಿವಕುಮಾರ್ ಸಂತಾಪ.!

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಬಿ. ಸರೋಜಾ ದೇವಿ (87) ಇಂದು ನಿಧನರಾಗಿದ್ದಾರೆ. ಹಿರಿಯ ನಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್
ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು. ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಭಿರುಚಿಯ ಚಿತ್ರಗಳ ಮೂಲಕ ಹಲವು ದಶಕಗಳ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ದುಃಖತಪ್ತ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್

ಅಭಿನಯ ಸರಸ್ವತಿಗೆ ಪ್ರೀತಿಯ ವಿದಾಯ.. ಕನ್ನಡದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಬಿ. ಸರೋಜಾ ದೇವಿ ಅವರ ನಿಧನದ ಸುದ್ದಿ ನೋವು ತಂದಿದೆ. ಕನ್ನಡ ಸೇರಿದಂತೆ ಪಂಚ ಭಾಷೆಗಳಲ್ಲಿ ನಟಿಸಿ, 6 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿ, ಸೈ ಎನಿಸಿಕೊಂಡಿದ್ದರು. ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ. ಅಪಾರ ಅಭಿಮಾನಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read