ಕಾರವಾರ: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪತ್ನಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ.
ಪೊರಕೆ, ಕಟ್ಟಿಗೆಯಿಂದ ಚಂದ್ರಶೇಖರ ಸಿದ್ದಿಗೆ ಪತ್ನಿ ಹಲ್ಲೆ ಮಾಡಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ನಂತರ ಚಂದ್ರಶೇಖರ ಸಿದ್ದಿ ಕಾಮಿಡಿ ಶೋ, ಕೆಲವು ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸಿದ್ದು, ನಂತರ ಅವಕಾಶ ಸಿಗದೇ ನೊಂದಿದ್ದರು. ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ.
ಜುಲೈ 31 ರಂದು ಮಧ್ಯಾಹ್ನ ಚಂದ್ರಶೇಖರ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತ್ನಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ತಾಯಿ ದೂರು ನೀಡಿದ್ದರು.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ ಚಂದ್ರಶೇಖರ ಸಿದ್ದಿ(31) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಕಬ್ಬಿಗೆ ಗ್ರಾಮಕ್ಕೆ ಪತ್ನಿಯೊಂದಿಗೆ ಕೆಲಸಕ್ಕೆ ತೆರಳಿದ್ದ ಚಂದ್ರಶೇಖರ ಸಿದ್ದಿ ಹಲ್ಲೆ ಉಳಿದುಕೊಂಡಿದ್ದರು. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ದಂಪತಿ ಕಲಹವೇ ಆತ್ಮಹತ್ಯೆ ಆತ್ಮಹತ್ಯೆಗೆ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಕಟ್ಟಿಗೆ ಪೊರಕೆಯಿಂದ ಪತ್ನಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.