ವಿಜಯಪುರ: ನಗರದ ಹೊರಭಾಗದಲ್ಲಿರುವ ಭೂತನಾಳ ಕೆರೆಯಲ್ಲಿ ಆರು ಶವಗಳು ಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಕೆರೆಯಲ್ಲಿ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಬಾಲಕರ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಶವಗಳು ಪತ್ತೆಯಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಹಾಗೂ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಆರು ಮಂದಿ ಒಂದೇ ವೇಳೆ ಕೆರೆಗೆ ಬಿದ್ದರೇ ಅಥವಾ ಯಾರಾದರೂ ಕೊಲೆ ಮಾಡಿದ್ದಾರೆಯೇ..? ಅಥವಾ ಬೇರೆ ಬೇರೆ ಸಂದರ್ಭಗಳಲ್ಲಿ ಮೃತಪಟ್ಟಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಸಾವಿನ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

