ಮಂಡ್ಯ: ಬಿ.ಜಿ. ಪುರ ನಾಡಕಚೇರಿಯ ಗ್ರಾಮ ಲೆಕ್ಕಿಗ ನಿರಂಜನ್ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಹುಡುಕಾಟ ನಡೆಸಲಾಗಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಿ.ಜಿ. ಪುರ ಗ್ರಾಮ ಪಂಚಾಯಿತಿ ನಾಡ ಕಚೇರಿಯ ಗ್ರಾಮ ಲೆಕ್ಕೀಗ ನಿರಂಜನ್ ಕಾವೇರಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ಕೈಗೊಳ್ಳಲಾಗಿದೆ.
ಮಧ್ಯಾಹ್ನ ಒಂದು ಗಂಟೆಯವರೆಗೂ ನಾಡಕಚೇರಿಯಲ್ಲಿಯೇ ಇದ್ದ ಅವರು ನಂತರ ಕಚೇರಿಯಿಂದ ಬೈಕ್ ನಲ್ಲಿ ಹೊರಟಿದ್ದರು. ಕಾವೇರಿಪುರ ಸೇತುವೆಯ ಮೇಲೆ ನಿರಂಜನ್ ಬೈಕ್ ಪತ್ತೆಯಾಗಿದೆ.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಾವೇರಿಪುರ ಸೇತುವೆ ಮೇಲೆ ಬೈಕ್ ನಿಲ್ಲಿಸಿ ನಿರಂಜನ್ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.