ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಅರಾಜಕತೆ ಸೃಷ್ಟಿಯಾಗಿದೆ. ಈ ಹಿನ್ನೆಲೆ ಭಾರತ ಬಾಂಗ್ಲಾ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಈ ಎಲ್ಲಾ ಬೆಳವಣಿಗೆಳ ಹಿನ್ನೆಲೆ ಪ್ರಧಾನಿ ಮೋದಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಸಭೆ ಕರೆದಿದ್ದಾರೆ. ಸಂಸತ್ ನಲ್ಲಿ ಬಾಂಗ್ಲಾ ರಾಜಕೀಯ ಬೆಳವಣಿಗೆಗಳ ಮಹತ್ವದ ಚರ್ಚೆ ನಡೆಸಲಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ ನೀಡಿದ್ದು, ಢಾಕಾದಲ್ಲಿರುವ ತಮ್ಮ ನಿವಾಸವನ್ನು ತೊರೆದಿದ್ದಾರೆ. ಅವರು ನಿನ್ನೆ ಭಾರತಕ್ಕೆ ಆಗಮಿಸಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
https://twitter.com/ANI/status/1820671377596379443?ref_src=twsrc%5Etfw%7Ctwcamp%5Etweetembed%7Ctwterm%5E1820671377596379443%7Ctwgr%5Eebc6c216e4f71d6fbdec3ae6770774b0f8cceda5%7Ctwcon%5Es1_&ref_url=https%3A%2F%2Fwww.livemint.com%2Fnews%2Fworld%2Fbangladesh-violence-live-update-sheikh-hasina-resigns-leaves-country-in-army-helicopter-protest-violence-students-11722850333829.html