ಶಿವಮೊಗ್ಗ: ಈದ್ ಮಿಲಾದ್ ಅಂಗವಾಗಿ ಶಿವಮೊಗ್ಗದಲ್ಲಿ ಇಂದು ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ವ್ಯಕ್ತಿಯೊಬ್ಬ ಮಾರಕಾಸ್ತ್ರ ಪ್ರದರ್ಶಿಸಿದ ಘಟನೆ ನಡೆದಿದೆ.
ಭಾರೀ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದ ಮೆರವಣಿಗೆ ಶಿವಮೊಗ್ಗ ನಗರದ ಅಮೀರ್ ಅಹ್ಮದ್ ವೃತ್ತದ ರಸ್ತೆಯಲ್ಲಿ ಸಾಗುವಾಗ ವ್ಯಕ್ತಿಯೊಬ್ಬ ಮಾರಕಾಸ್ತ್ರ ಪ್ರದರ್ಶಿಸಿದ್ದಾನೆ. ಮೆರವಣಿಗೆಯ ವೇಳೆ ಮಾರಕಾಸ್ತ್ರ ಪ್ರದರ್ಶಿಸದಂತೆ ನಿರ್ಬಂಧ ವಿಧಿಸಲಾಗಿತ್ತು. ನಿರ್ಬಂಧದ ನಡುವೆಯೇ ವ್ಯಕ್ತಿ ಮಾರಕಾಸ್ತ್ರ ಪ್ರದರ್ಶಿಸಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.