HomeKarnatakaBREAKING : ಬೆಳಗಾವಿಯಲ್ಲಿ ‘ಪಂಚಮಸಾಲಿ’ ಹೋರಾಟದ ಸ್ಥಳದಲ್ಲಿ ಮಾರಕಾಸ್ತ್ರಗಳು ಪತ್ತೆ.!

BREAKING : ಬೆಳಗಾವಿಯಲ್ಲಿ ‘ಪಂಚಮಸಾಲಿ’ ಹೋರಾಟದ ಸ್ಥಳದಲ್ಲಿ ಮಾರಕಾಸ್ತ್ರಗಳು ಪತ್ತೆ.!

ಬೆಳಗಾವಿ : ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟದ ಸ್ಥಳದಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿದೆ. ಸ್ಕೂಟರ್ ಮೇಲೆ ಮಾರಕಾಸ್ತ್ರಗಳು ಇದ್ದಿದ್ದನ್ನು ಕಂಡು ಪೊಲೀಸರು ಶಾಕ್ ಆಗಿದ್ದಾರೆ.

ಬೆಳಗಾವಿ ತಾಲೂಕಿನ ಹೀರೇಬಾಗೇವಾಡಿ ಟೋಲ್ ಬಳಿ ಬೈಕ್ ನಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿದೆ. ಸದ್ಯ, ಪೊಲೀಸರು ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹೋರಾಟಕ್ಕೆ ಬಂದಿದ್ದವರು ಮಾರಕಾಸ್ತ್ರ ತಂದಿದ್ರಾ ಎಂಬ ಅನುಮಾನದ ಹಿನ್ನೆಲೆ ತನಿಖೆ ನಡೆಯುತ್ತಿದೆ. ಹೀರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಳಗಾವಿಯ ಸುವರ್ಣ ಸೌಧದ ಬಳಿ ಡಿ.9ರಂದು ನಡೆದಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಖಂಡಿಸಿ ಇಂದು ಬೆಳಗಾವಿ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ಪ್ರಂಚಮಸಾಲಿ ಸಮುದಾಯದವರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಪ್ರತಿಯೊಂದು ಹಳ್ಳಿಗಳಲ್ಲಿ ಮುಖ್ಯ ರಸ್ತೆಗಳನ್ನು ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಚಮಸಾಲಿ ರೈತ ಮುಖಂಡರ ಮೇಲೆ, ಅನ್ನದಾತರ ಮೇಲೆ ಪೊಲೀಸರು ಮನಬಂದಂತೆ ಲಾಠಿಚಾರ್ಜ್ ಮಾಡಿರುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular