HomeKarnatakaBIG BREAKING : ಶರಣಾಗತಿಯಾದ 6 ಮಂದಿ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ.!

BIG BREAKING : ಶರಣಾಗತಿಯಾದ 6 ಮಂದಿ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ.!

ಚಿಕ್ಕಮಗಳೂರು :   ಶರಣಾದ 6 ಮಂದಿ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಕೊಪ್ಪ ತಾಲೂಕಿನ ಮೇಗೂರು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಚಿಕ್ಕಮಗಳೂರು ಜಿಲ್ಲೆಯ  ಕೊಪ್ಪ ತಾಲೂಕಿನ ಮೇಗೂರು ಅರಣ್ಯ ಪ್ರದೇಶದಲ್ಲಿ ಗುಂಡಿ ತೋಡಿ ನಕ್ಸಲರು ಶಸ್ತ್ರಾಸ್ತ್ರಗಳನ್ನು ಮುಚ್ಚಿಟ್ಟಿದ್ದರು. ಕಾರ್ಯಾಚರಣೆ ನಡೆಸಿದ ಕೊಪ್ಪ ಪೊಲೀಸ್ ಅಧಿಕಾರಿಗಳ ತಂಡ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಮೇಗೂರು ಅರಣ್ಯ ಪ್ರದೇಶದಲ್ಲಿ ಅಡಗಿದ್ದ 6 ಮಂದಿ ನಕ್ಸಲರು ನಂತರ ಅಲ್ಲಿಂದಲೇ ಬಂದು ಶರಣಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ 6 ನಕ್ಸಲರು ಜ.8ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಸಮ್ಮುಖದಲ್ಲಿ ಶರಣಾಗತರಾಗಿದ್ದರು. 6 ನಕ್ಸಲರನ್ನು ಎನ್ ಐಎ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ 6 ನಕ್ಸಲರಿಗೂ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಎಂಬ ನಕ್ಸಲರು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.

ಶಸ್ತ್ರಾಸ್ತ್ರ ಎಲ್ಲಿದೆ ಎನ್ನುವುದು ಪೊಲೀಸರಿಗೆ ಗೊತ್ತಿದೆ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ನಾಪತ್ತೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಶಸ್ತ್ರಾಸ್ತ್ರ ಎಲ್ಲಿದೆ ಎನ್ನುವುದು ಪೊಲೀಸರಿಗೆ ಗೊತ್ತಿದೆ. ಮಹಜರು ಮಾಡಿ ಶಸ್ತ್ರಾಸ್ತ್ರಗಳನ್ನು ತರುತ್ತಾರೆ. ನಕ್ಸಲಿಸಂ ಇರಬಾರದು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದರು.

ಅನ್ಯಾಯ ಶೋಷಣೆ ವಿರುದ್ಧ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವುದೇ ಹೋರಾಟ ನಡೆಸಿದರೂ ಶಾಂತಿಯುತವಾಗಿ ಇರಬೇಕು ಎಂದು ಹೇಳಿದ ಸಿಎಂ, ಮತ್ತೊಬ್ಬ ನಕ್ಸಲ್ ಇದ್ದಾನೋ ಇಲ್ಲವೋ ನಮಗೆ ಮಾಹಿತಿ ಇಲ್ಲ. ಮುಖ್ಯವಾಹಿನಿಗೆ ಬರುವಂತೆ ಆತನಿಗೂ ನಾನು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular