BREAKING : ಏಕೆ ನಟ ದರ್ಶನ್ ಜಾಮೀನು ರದ್ದು ಮಾಡಬಾರದು..? : ದರ್ಶನ್ ಪರ ವಕೀಲರಿಗೆ ಸುಪ್ರೀಂಕೋರ್ಟ್ ಪ್ರಶ್ನೆ.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ & ಗ್ಯಾಂಗ್ ಅರ್ಜಿ ವಿಚಾರಣೆ ನಡೆದಿದ್ದು, ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಯನ್ನ ಜುಲೈ 22 ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಸುಪ್ರೀಂಕೋರ್ಟ್ ‘’ ಏಕೆ ದರ್ಶನ್ ಜಾಮೀನು ರದ್ದು ಮಾಡಬಾರದು..? ಹೇಳಿ ಎಂದು ದರ್ಶನ್ ಪರ ವಕೀಲರಿಗೆ ಸುಪ್ರೀಂಕೋರ್ಟ್ ಪ್ರಶ್ನೆ ಮಾಡಿದೆ. ನಟ ದರ್ಶನ್ ಪರ ಕಪಿಲ್ ಸಿಬಲ್ ಗೆ ಕೋರ್ಟ್ ಈ ಪ್ರಶ್ನೆ ಮಾಡಿದೆ. ಈ ಪ್ರಕರಣದಲ್ಲಿ ನಟ ದರ್ಶನ್ ಕೈವಾಡ ಇದೆ ಎನ್ನುವುದಕ್ಕೆ ಸಾಕ್ಷ ಇಲ್ಲ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದ್ದು, ಕಪಿಲ್ ಸಿಬಲ್ ವಾದವನ್ನು ಸುಪ್ರೀಂಕೋರ್ಟ್ ಒಪ್ಪಲಿಲ್ಲ.

ಬಂಧನ ಕಾರಣಗಳನ್ನಷ್ಟೇ ನಾವು ಕೇಳುತ್ತಿದ್ದೇವೆ. ಬಂಧನ ಕಾನೂನು ಬದ್ದವಾಗಿದೆ ಎನ್ನುವುದಾದರೆ ಉತ್ತರ ಕೊಡಿ. ದರ್ಶನ್ ಬಂಧನಕ್ಕೆ ಇದ್ದ ಲೀಡ್ ಏನು..? ಎಂದು ರಾಜ್ಯ ಸರ್ಕಾರದ ಪರ ವಕೀಲರಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಮುಂದಿನ ವಿಚಾರಣೆ 22 ಕ್ಕೆ ನಿಗದಿಯಾಗಿದ್ದು, ಅಂದು ಅಂತಿಮ ಆದೇಶ ಹೊರಬೀಳುವ ಸಾಧ್ಯತೆಯಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿತ್ತು. . ವಾದ ವಿವಾದ ಆಲಿಸಿದ ಕೋರ್ಟ್ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಜಾಮೀನು ಆದೇಶವನ್ನು ರದ್ದುಗೊಳಿಸುವಂತೆ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read