HomeLatest NewsBREAKING: ಜಮೀನಿನಿಂದ ಬರುವಾಗ ಕಾಡಾನೆ ದಾಳಿ: ಸ್ಥಳದಲ್ಲೇ ರೈತ ಸಾವು

BREAKING: ಜಮೀನಿನಿಂದ ಬರುವಾಗ ಕಾಡಾನೆ ದಾಳಿ: ಸ್ಥಳದಲ್ಲೇ ರೈತ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಂಡಿಗುಡ್ಡ ಬಳಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.

ಕುಮಾರ್(50) ಮೃತಪಟ್ಟವರು. ಜಮೀನಿನಿಂದ ಮನೆಗೆ ತೆರಳುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಕಾಡಾನೆ ದಾಳಿಯಿಂದ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚನ್ನಗಿರಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular