BREAKING : ‘ಭವಾನಿ ರೇವಣ್ಣ’ಗೆ ಜೈಲೋ..ಬೇಲೋ..? : ಇಂದು ಮಧ್ಯಾಹ್ನ 2:45 ಕ್ಕೆ ತೀರ್ಪು ಪ್ರಕಟ

ಹಾಸನ : ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿದ್ದು, ಇಂದು ಮಧ್ಯಾಹ್ನ 2:45 ಕ್ಕೆ ಕೋರ್ಟ್ ತೀರ್ಪು ಪ್ರಕಟಿಸಲಿದೆ.

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತೆ ಕಿಡ್ನಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ಇಂದು ಮಧ್ಯಾಹ್ನ 2:45 ಕ್ಕೆ ಪ್ರಕಟವಾಗಲಿದೆ. ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಬಂಧನಕ್ಕೊಳಗಾಗಿ ಜಾಮೀನು ಪಡೆದುಕೊಂಡಿದ್ದಾರೆ. ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಎದುರಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ್ದು, ಇಂದು ಪ್ರಕಟಿಸಲಿದೆ.

ಇದರ ನಡುವೆ ಭವಾನಿ ರೇವಣ್ಣ ಗೆ ಎಸ್ ಐ ಟಿ ನೋಟಿಸ್ ನೀಡಿದೆ. ನಾಳೆ ಸಂಜೆ 5 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಎಸ್ ಐ ಟಿ ನೋಟಿಸ್ ನೀಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read