ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಡಿಜೆ ಹಳ್ಳಿ ಠಾಣೆ ಇನ್ಸ್ಪೆಕ್ಟರ್ ಸುನೀಲ್ ಅವರನ್ನ ಅಮಾನತು ಮಾಡಲಾಗಿದೆ. ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಘಟನೆ ಸಂಬಂಧ ಇನ್ಸ್ಪೆಕ್ಟರ್ ಹಾಗೂ ಎಎಸ್ ಐ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಸೀಮಂತ್ ಸಿಂಗ್ ಮಾಹಿತಿ ನೀಡಿದ್ದಾರೆ,
ಬೆಂಗಳೂರು ಪೂರ್ವ ವಿಭಾಗದ ಗೋವಿಂದಪುರ ಠಾಣೆಯಲ್ಲಿ ಸಂತ್ರಸ್ತ ಮಹಿಳೆಯ ದೂರಿನ ಆಧಾರದ ಮೇಲೆ ಇನ್ಸ್ಪೆಕ್ಟರ್ ಸುನಿಲ್ ಮತ್ತು ಎಎಸ್ಐ ಪ್ರಕಾಶ್ ರಾಥೋಡ್ ವಿರುದ್ಧ ಎಫ್ಐಆರ್ ದಾಖಲೆಸಿಕೊಳ್ಳಲಾಗಿದೆ.
ರಿಜಿಸ್ಟ್ರಾರ್ ಮ್ಯಾರೇಜ್ ಆಗುವುದಾಗಿ ಇನ್ಸ್ಪೆಕ್ಟರ್ ಸುನಿಲ್ ಹೇಳಿದ್ದ. ಎಂಟನೇ ಮೈಲಿಯಲ್ಲಿರುವ ಮನೆ ಮತ್ತೆ ಹೋಟೆಲ್ ಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾನೆ. ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ. ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ನಿನ್ನನ್ನು ಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಪ್ರತಿ ಬಾರಿಯೂ ವಿಡಿಯೋ ಕಾಲ್ ಮಾಡು ಎಂದು ಆರೋಪಿ ಪೀಡಿಸುತ್ತಿದ್ದ ಎಂದು ಸಂತ್ರಸ್ತೆ ಹೇಳಿದ್ದರು. ಘಟನೆ ಸಂಭಂದ 36 ವರ್ಷದ ಸಂತ್ರಸ್ತೆ ಡಿಜಿ ಕಚೇರಿಗೆ ದೂರು ನೀಡಿದ್ದರು. ಈ ಸಂಬಂಧ ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
