ಕಾರವಾರ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಡೊಮಗೇರಿ ಗ್ರಾಮದಲ್ಲಿ ಮರ ಮುರಿದು ಬಿದ್ದು ಗರ್ಭಿಣಿ ಸಾವನ್ನಪ್ಪಿದ್ದಾರೆ.
ಮೂವರು ಮಕ್ಕಳು ಸೇರಿ ಒಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂಗನವಾಡಿಯಿಂದ ಮಕ್ಕಳನ್ನು ಕರೆದೊಯ್ಯುವಾಗ ಘಟನೆ ನಡೆದಿದೆ. ಮರ ಬಿದ್ದು ಮಕ್ಕಳನ್ನು ಕರೆದೊಯ್ಯುತ್ತಿದ್ದ ಸಾವಿತ್ರಿ ಸಾವನ್ನಪ್ಪಿದ್ದಾರೆ. ಓರ್ವ ಮಹಿಳೆ ಮತ್ತು ಮೂವರು ಮಕ್ಕಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.