HomeLatest NewsBREAKING: ವಿಡಿಯೋ ಮಾಡುತ್ತಿದ್ದ ಮಹಿಳೆ ಮೇಲೆ ಕಲ್ಲು, ದೊಣ್ಣೆಯಿಂದ ಹಲ್ಲೆ

BREAKING: ವಿಡಿಯೋ ಮಾಡುತ್ತಿದ್ದ ಮಹಿಳೆ ಮೇಲೆ ಕಲ್ಲು, ದೊಣ್ಣೆಯಿಂದ ಹಲ್ಲೆ

ನೆಲಮಂಗಲ: ರಸ್ತೆಗೆ ಮಣ್ಣು ಹಾಕುವ ವಿಚಾರಕ್ಕೆ ಗಲಾಟೆಯಾಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ನೆಲಮಂಗಲ ತಾಲೂಕಿನ ಕೆಂಗಲ್ ಕೆಂಪೊಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕೆಂಗಲ್ ಕೆಂಪೊಹಳ್ಳಿ ಗ್ರಾಮದಲ್ಲಿ ನಾಗರತ್ನಮ್ಮ ಎಂಬುವವರ ಮೇಲೆ ದೊಣ್ಣೆ, ಕಲ್ಲುಗಳಿಂದ ಹಲ್ಲೆ ನಡೆಸಲಾಗಿದೆ.

ಪ್ರೇಮಕುಮಾರ್, ಜಯಮ್ಮ, ಮಹಿಮಗೌಡ ಅವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಕ್ಕೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ನಿರಂತರ ಮಳೆಯಿಂದಾಗಿ ಗ್ರಾಮದ ರಸ್ತೆ ಗುಂಡಿ ಬಿದ್ದ ಹಿನ್ನೆಲೆಯಲ್ಲಿ ಮಣ್ಣು ಹಾಕಿ ರಸ್ತೆ ಸರಿ ಮಾಡಲು ಗ್ರಾಮದ ಜನರು ಮುಂದಾಗಿದ್ದರು. ರಸ್ತೆ ದುರಸ್ತಿ ಮಾಡದಂತೆ ಕೆಲವರು ಉದ್ದೇಶಪೂರ್ವಕವಾಗಿ ತಡೆದಿದ್ದು, ವಿಡಿಯೋ ಮಾಡುವಾಗ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular