HomeKarnatakaBREAKING : ಶಿವಮೊಗ್ಗದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ, ಮಗುವಿನ ಸ್ಥಿತಿ ಚಿಂತಾಜನಕ..!

BREAKING : ಶಿವಮೊಗ್ಗದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ, ಮಗುವಿನ ಸ್ಥಿತಿ ಚಿಂತಾಜನಕ..!

ಶಿವಮೊಗ್ಗ : ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿಯಾಗಿ 5 ತಿಂಗಳ ಮಗುವಿನ ಸ್ಥಿತಿ ಚಿಂತಾಜನಕವಾದ ಘಟನೆ ಶಿವಮೊಗ್ಗದ ಸಿದ್ದಿಗಿ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಕಸ್ತೂರಿ ಎಂದು ಗುರುತಿಸಲಾಗಿದೆ. ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದ್ದು, ಗಂಡನ ಮನೆಯವರು ಮಹಿಳೆ ಹಾಗೂ ಮಗುವಿಗೆ ವಿಷ ಕುಡಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ಸಂಬಂಧ ಕಸ್ತೂರಿ ಪತಿ ಮಂಜುನಾಥ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನನ್ನ ಮಗಳ ಸಾವಿಗೆ ಗಂಡನ ಮನೆಯವರೇ ಕಾರಣ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಸ್ತೂರಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular