ಬೆಂಗಳೂರು : ಬೆಂಗಳೂರಿನ ರೈಲ್ವೇ ನಿಲ್ದಾಣದ ಬಳಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಬೆಂಗಳೂರಿನ ಯಶವಂತಪುರದ ರೈಲ್ವೇ ನಿಲ್ದಾಣದ ಬಳಿ ಸುಟ್ಟ ಸ್ಥಿತಿಯಲ್ಲಿ ಪ್ಲಾಸ್ಟಿಕ್ ನಲ್ಲಿ ಕವರ್ ಮಾಡಿದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಯನ್ನು ಕೊಂದು ಸುಟ್ಟು ಇಲ್ಲಿಗೆ ತಂದು ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.