BREAKING: ವಿಶ್ವವಿಖ್ಯಾತ ಮೈಸೂರು ದಸರಾ ಗಜಪಡೆ ಪಟ್ಟಿ ಬಿಡುಗಡೆ: ಚಿನ್ನದ ಅಂಬಾರಿ ಹೊರಲಿರುವ ‘ಕ್ಯಾಪ್ಟನ್ ಅಭಿಮನ್ಯು’

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಕ್ಯಾಪ್ಟನ್ ಅಭಿಮನ್ಯು ಆನೆ ಚಿನ್ನದ ಅಂಬಾರಿ ಹೊರಲಿದೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಗಜಪಡೆ ಪಟ್ಟೆಯನ್ನು ಬಿಡುಗಡೆ ಮಾಡಿದ್ದಾರೆ. ಆಗಸ್ಟ್ 4ರಂದು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಿಂದ ಗಜ ಪಯಣ ಆರಂಭವಾಗಲಿದೆ.

ಅಭಿಮನ್ಯು, ಕಂಜನ್ ಸೇರಿದಂತೆ 9 ಆನೆಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ದಸರಾ ಮಹೋತ್ಸವದಲ್ಲಿ ಒಟ್ಟು 14 ಆನೆಗಳು ಪಾಲ್ಗೊಳ್ಳಲಿವೆ. 14 ಆನೆಗಳ ಪೈಕಿ 9 ಆನೆಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮತ್ತಿಗೋಡು ಸಾಕಾನೆ ಶಿಬಿರದಲ್ಲಿರುವ 59 ವರ್ಷದ ಅಭಿಮನ್ಯು ವಿಜಯದಶಮಿಯಂದು ಚಿನ್ನದ ಅಂಬಾರಿ ಹೊರಲಿದ್ದಾನೆ.

ನಾಗರಹೊಳೆಯ ಮತ್ತಿಗೂಡು ಶಿಬಿರದ 25 ವರ್ಷದ ಆನೆ ಭೀಮ, ದುಬಾರೆ ಶಿಬಿರದ ಕಂಜನ್, ಧನಂಜಯ, ಪ್ರಶಾಂತ, ಕಾವೇರಿ, ಬಳ್ಳೆ ಶಿಬಿರದ ಮಹೇಂದ್ರ, ಲಕ್ಷ್ಮಿ, ದೊಡ್ಡಹರವೆ ಶಿಬಿರದ ಏಕಲವ್ಯ ಸೇರಿ 9 ಆನೆಗಳು ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸಲಿವೆ.

ಎರಡನೇ ಹಂತದಲ್ಲಿ ಐದು ಆನೆಗಳ ತಂಡ ಮೈಸೂರಿಗೆ ಆಗಮಿಸಲಿದೆ. ಹಿರಿಯ ಅರಣ್ಯ ಅಧಿಕಾರಿಗಳಾದ ಮೀನಾಕ್ಷಿ ನೇಗಿ, ಪಿ.ಸಿ. ರೇ, ಮಹೇಶ್ ಶಿರೂರು, ಮನೋಜ್ ಕುಮಾರ್, ಮಾಲತಿ, ಪ್ರಭುಗೌಡ, ಬಿರಾದರ ಜೊತೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸಭೆ ನಡೆಸಿದ್ದಾರೆ. ನಂತರ ಗಜಪಡೆ ಪಟ್ಟಿಯನ್ನು ಪ್ರಕಟಿಸಿದ್ದಾರೆ.

“ಆ.4 ರಂದು ಗಜಪಯಣಕ್ಕೆ ಚಾಲನೆ!

ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಮತ್ತೆ ಅಂಬಾರಿ ಹೊರುತ್ತಿದ್ದು, ಆಗಸ್ಟ್ 4ರಂದು ವೀರನಹೊಸಳ್ಳಿಯಿಂದ ಗಜಪಯಣಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಾಗುತ್ತದೆ.

ಈ ಬಾರಿ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ 14 ಆನೆಗಳ ಪೈಕಿ ಮೊದಲ ಹಂತದಲ್ಲಿ ಆಯ್ಕೆಯಾದ 9 ಆನೆಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆವು.

ಪ್ರಮುಖ ಆನೆಗಳು: ಅಭಿಮನ್ಯು, ಭೀಮ, ಕಂಜನ್, ಧನಂಜಯ, ಪ್ರಶಾಂತ್, ಮಹೇಂದ್ರ, ಏಕಲವ್ಯ

ಹೆಣ್ಣು ಆನೆಗಳು: ಕಾವೇರಿ, ಲಕ್ಷ್ಮೀ

ಇನ್ನೂ 5 ಆನೆಗಳನ್ನು ಎರಡನೇ ಹಂತದಲ್ಲಿ ಕಾಡಿನಿಂದ ಮೈಸೂರಿಗೆ ತರಲಾಗುತ್ತದೆ” ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read