HomeKarnatakaBREAKING : ಕೋಲಾರದಲ್ಲಿ ಸಾಹಿತಿ 'ಕೋಟಗಾನಹಳ್ಳಿ ರಾಮಯ್ಯ' ಮೇಲೆ ಮಾರಣಾಂತಿಕ ಹಲ್ಲೆ, ಆಸ್ಪತ್ರೆಗೆ ದಾಖಲು

BREAKING : ಕೋಲಾರದಲ್ಲಿ ಸಾಹಿತಿ ‘ಕೋಟಗಾನಹಳ್ಳಿ ರಾಮಯ್ಯ’ ಮೇಲೆ ಮಾರಣಾಂತಿಕ ಹಲ್ಲೆ, ಆಸ್ಪತ್ರೆಗೆ ದಾಖಲು

ಕೋಲಾರ : ಕೋಲಾರದಲ್ಲಿ ಸಾಹಿತಿ ಕೋಟಗಾನಹಳ್ಳಿ ರಾಮಯ್ಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೋಲಾರ ತಾಲೂಕಿನ ಅಂತರಗಂಗೆ ಬೆಟ್ಟದ ಪಾಪರಾಜನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳು ಹಿರಿಯ ಹೋರಾಟಗಾರ ಕೋಟಿಗಾನಹಳ್ಳಿ ರಾಮಯ್ಯ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಹಲ್ಲೆಯಿಂದ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರ ಕಣ್ಣಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸದ್ಯ ಕೋಲಾರದ SNR ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಜಿ ಗ್ರಾ.ಪಂ ಸದಸ್ಯನಾಗಿರುವ ಮಂಜುನಾಥ ಮತ್ತು ತೇರಹಳ್ಳಿಯ ಮುನಿಯಪ್ಪ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದುಷ್ಕರ್ಮಿಗಳ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವಸ್ಥಾನವೊಂದರಲ್ಲಿ ಗ್ರಾಮಸ್ಥರಿಗೆ ಕಿರಿಕಿರಿಯಾಗುವಂತೆ ಜೋರಾಗಿ ಮೈಕ್ ಹಾಕಲಾಗಿತ್ತು. ಈ ವೇಳೆ ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯನವರು ಮೈಕ್ ಶಬ್ದ ಕಡಿಮೆ ಮಾಡುವಂತೆ ಹೇಳಿದ್ದಾರೆ. ಇಷ್ಟಕ್ಕೇ ಕಿರಿಕ್ ಮಾಡಿದ ಕಿಡಿಗೇಡಿಗಳು ಹಿರಿಯ ಹೋರಾಟಗಾರ ಕೋಟಿಗಾನಹಳ್ಳಿ ರಾಮಯ್ಯ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular