ಕೊಪ್ಪಳ: ರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಪ್ಪಳದ ಬಹದ್ದೂರ್ ಬಂಡಿ ರಸ್ತೆಯಲ್ಲಿ ಘಟನೆ ನಡೆದಿದೆ.
30 ವರ್ಷದ ಗವಿಸಿದ್ದಪ್ಪ ನಾಯಕ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಪ್ಪಳದ ಬಹದ್ದೂರ್ ಬಂಡಿ ನಡುರಸ್ತೆಯಲ್ಲಿಯೇ ದಾಳಿ ಮಾಡಿದ ದುಷ್ಕರ್ಮಿಗಳು ಮಚ್ಚಿನಿಂದ ಥಳಿಸಿ ಗವಿಸಿದ್ದಪ್ಪನನ್ನು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಎಸ್ಪಿ ರಾಮ್ ಎಲ್. ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.