ಶಿವಮೊಗ್ಗ: ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಚಕ್ರ ಡ್ಯಾಂ ಹಿನ್ನೀರಿನಲ್ಲಿ ನಡೆದಿದೆ. ಹೊಳೆ ದಾಟುವಾಗ ತೆಪ್ಪ ಮಗುಚಿ 20 ವರ್ಷದ ಪೂರ್ಣೇಶ್ ಮೃತಪಟ್ಟಿದ್ದಾರೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕಟ್ಟಿನಕಾರು ಗ್ರಾಮದಲ್ಲಿ ಘಟನೆ ನಡೆದಿದೆ. ಕಾಲು ಸಂಕ ನಿರ್ಮಾಣ ಮಾಡುವಂತೆ ಇಪ್ಪತ್ತು ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಮೃತದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.