HomeKarnatakaBREAKING: ಹುಟ್ಟುಹಬ್ಬದ ಸಂಭ್ರಮದ ದಿನವೇ ಅಪಘಾತದಲ್ಲಿ ಯುವಕ ಸಾವು

BREAKING: ಹುಟ್ಟುಹಬ್ಬದ ಸಂಭ್ರಮದ ದಿನವೇ ಅಪಘಾತದಲ್ಲಿ ಯುವಕ ಸಾವು

ಬೆಂಗಳೂರು: ಹುಟ್ಟುಹಬ್ಬದ ದಿನವೇ ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಐವರಕಂಡಪುರ ಬಳಿ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ಐವರಕಂಡಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ತೋಟದ ಗುಡ್ಡದಹಳ್ಳಿ ನಿವಾಸಿ ಪವನ್(24) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ನಿನ್ನೆ ಸಂಜೆ 5:45ಕ್ಕೆ ಹುಟ್ಟುಹಬ್ಬ ಮುಗಿಸಿ ಯುವಕ ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ.

ಹುಟ್ಟುಹಬ್ಬ ಸಂಭ್ರಮಿಸಿ ಬೈಕ್ ನಲ್ಲಿ ಪವನ್ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಪವನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸೋಲದೇವನಹಳ್ಳಿ ಸಂಚಾರಿ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular