ಬೆಂಗಳೂರು: ನಡುರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಹತ್ಯೆ ಮಾಡಲಾಗಿದೆ. ದೊಡ್ಡಬಳ್ಳಾಪುರದ ದೀಪಕ್(30) ಕೊಲೆಯಾದ ಯುವಕ ಎಂದು ಹೇಳಲಾಗಿದೆ.
ದೀಪಕ್ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದವನ ಮೇಲೆ ಲಾಂಗ್, ಮಚ್ಚುಗಳಿಂದ ದಾಳಿ ನಡೆಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಚಾಲಕನಾಗಿ ದೀಪಕ್ ಕೆಲಸ ಮಾಡುತ್ತಿದ್ದ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
