ಕಾರವಾರ: ಕುಟುಂಬ ಸಮೇತ ಜಾತ್ರೆಗೆ ತೆರಳಿದಾಗ ಯುವಕ ಮನೆಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ನಡೆದಿದೆ.
ದಿನಕರ್ ಎಂಬುವರ ಮನೆಗೆ ಬೆಂಕಿ ಹಚ್ಚಲಾಗಿದೆ. ದಿನಕರ್ ಕುಟುಂಬದವರು ಕುಮಟಾದ ವೆಂಕಟರಮಣ ಜಾತ್ರೆಗೆ ತೆರಳಿದ್ದ ವೇಳೆ ಫೈಸಾನ್ ಜಾಫರ್ ಶೇಖ್(18) ಮನೆಗೆ ಬೆಂಕಿ ಹಚ್ಚಿದ್ದಾನೆ. ಕೂಡಲೇ ಅಕ್ಕಪಕ್ಕದ ಮನೆಯವರು ಬೆಂಕಿಯನ್ನು ನಂದಿಸಿದ್ದಾರೆ. ಆರೋಪಿಯನ್ನು ಕುಮಟಾ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆಯ ನಂತರ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಎಸ್ಪಿ ದೀಪನ್, ಅಡಿಷನಲ್ ಎಸ್ಪಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆ ಮಾಲೀಕ ದಿನಕರ್ ಕುಟುಂಬಕ್ಕೆ ಪೋಲೀಸ್ ಭದ್ರತೆ ಒದಗಿಸಲಾಗಿದೆ. ಅಹಿತಕರ ಘಟನೆ ನಡೆದಂತೆ ದೇವರಹಕ್ಕಲ ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

