ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಯುವತಿ ನಾಲ್ಕು ದಿನಗಳ ನಂತರ ಪತ್ತೆಯಾಗಿದ್ದಾರೆ.
ಮಡಿಕೇರಿಯ ತಡೆಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ನಾಲ್ಕು ದಿನಗಳ ಶೋಧ ಕಾರ್ಯಾಚರಣೆ ಯಶಸ್ವಿಯಾಗಿದೆ.
ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಸತತ ಹುಡುಕಾಟ ನಡೆಸಿದ್ದರು. ಚಾರಣಕ್ಕೆ ತೆರಳಿದ್ದ ಶರಣ್ಯ ತಂಡದಿಂದ ಬೇರ್ಪಟ್ಟು ರಸ್ತೆ ಸಿಗದೇ ಪಾಳು ಬಿದ್ದ ಬಂಗಲೆಯೊದರಲ್ಲಿ ಉಳಿದುಕೊಂಡಿದ್ದರು. ಸ್ಥಳೀಯರ ಸಹಾಯದಿಂದ ಹುಡುಕಾಟ ಮುಂದುವರೆದಿದ್ದು, ಇಂದು ಅವರು ಪತ್ತೆಯಾಗಿದ್ದಾರೆ.
ಕಕ್ಕಬ್ಬೆ ಸಮೀಪದ ಕಬ್ಬಿನಕಾಡು ಹೋಂ ಸ್ಟೇ ನಲ್ಲಿ ತಂಗಿದ್ದ ಶರಣ್ಯ ಗುರುವಾರ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ಹೋದವರು ನಿಗೂಢವಾಗಿ ನಾಪತ್ತೆಯಾಗಿದ್ದರು. ಸ್ಥಳೀಯರ ಸಹಕಾರದಿಂದ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್, ಶ್ವಾನ ದಳದೊಂದಿಗೆ ಶೋಧ ನಡೆಸಿದರೂ ಪತ್ತೆಯಾಗದ ಕಾರಣ ಆತಂಕ ಮೂಡಿತ್ತು. ಇದೀಗ ಶರಣ್ಯ ಪತ್ತೆಯಾಗಿದ್ದಾರೆ.


