BREAKING : ಮಂಗಳೂರಿನಲ್ಲಿ ಗುಂಪು ಹಲ್ಲೆಯಿಂದ ಯುವಕ ಸಾವು ಕೇಸ್ : ಮೂವರು ಪೊಲೀಸ್ ಸಿಬ್ಬಂದಿಗಳು ಅಮಾನತು.!

ಮಂಗಳೂರು : ಮಂಗಳೂರಿನಲ್ಲಿ ಗುಂಪುಗೂಡಿ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಪ್ರಕರಣವನ್ನ ಮುಚ್ಚಿ ಹಾಕಲು ಯತ್ನಿಸಿದ ಆರೋಪದ ಮೇಲೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಶಿವಕುಮಾರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ಘಟನೆ ಸಂಬಂಧ ಇದುವರೆಗೆ 23 ಮಂದಿಯನ್ನು ಬಂಧಿಸಲಾಗಿದೆ.
.
ಮಂಗಳೂರು ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ ಕುಡುಪು ಎಂಬಲ್ಲಿ ಭಾನುವಾರ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಆತನ ಸಾವಿಗೆ ಕಾರಣವಾದ ಆರೋಪದ ಮೇಲೆ ಮಂಗಳೂರು ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ ಅಡಿಯಲ್ಲಿ 23 ಜನರನ್ನು ಬಂಧಿಸಿದ್ದಾರೆ .ಬಲಿಪಶುವನ್ನು 35 ರಿಂದ 40 ವರ್ಷ ವಯಸ್ಸಿನವನೆಂದು ಪ್ರಾಥಮಿಕವಾಗಿ ಗುರುತಿಸಲಾಗಿದ್ದು, ಕೇರಳದ ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲ್ಲೂಕಿನ ಪುಲ್ಪಲ್ಲಿ ಗ್ರಾಮದ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಕ್ಕೆ ಆತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read