ಶಿವಮೊಗ್ಗ: ಶಿವಮೊಗ್ಗದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಸೈಯದ್ ಬರ್ಕತ್(32) ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಯಗೊಂಡ ಸೈಯದ್ ಬರ್ಕತ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದ ಅಮೀರ್ ಅಹಮ್ಮದ್ ಸರ್ಕಲ್ ನಲ್ಲಿ ಸಯ್ಯದ್ ಬರ್ಕತ್ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದಾರೆ. ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು ಚಾಕು ಇರಿದು ಪರಾರಿಯಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಸಯ್ಯದ್ ಬರ್ಕತ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

