ಮಂಗಳೂರು: ರೌಡಿಶೀಟರ್, ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 8 ಮಂದಿ ಆರೋಪಿಗಳನ್ನು ಮೇ 9 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
8 ಮಂದಿ ಆರೋಪಿಗಳನ್ನು ಮೇ 9 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ. ಪೊಲೀಸರು ಆರೋಪಿಗಳನ್ನು ಕರೆತಂದು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗೆ ಶೋಧ ನಡೆಸುತ್ತಿದ್ದಾರೆ.
ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಹಂತಕರು ಮಂಗಳೂರಿನಲ್ಲಿಯೇ ಅವಿತುಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದರು. ಸುಹಾಸ್ ಶೆಟ್ಟಿ ಕೊಲೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ.
You Might Also Like
TAGGED:ಸುಹಾಸ್ ಶೆಟ್ಟಿ’ ಕೊಲೆ ಕೇಸ್