ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಮಹೇಶ್ ತಿಮರೋಡಿಯನ್ನು ಬಂಧಿಸಲಾಗಿದ್ದು, ಉಡುಪಿಯ ಬ್ರಹ್ಮಾವರಣ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಮಹೇಶ್ ತಿಮರೋಡಿ ಬಂಧನ ಖಂಡಿಸಿ ತಿಮರೋಡಿ ಬೆಂಬಲಿಗರು, ಸಹಚರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈನಡುವೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ್ ಆದೇಶ ಹೊರಡಿಸಿದ್ದಾರೆ.
ಬ್ರಹ್ಮಾವರ ಠಾಣೆಯ 500 ಮೀಟರ್ ವ್ಯಾಪ್ತಿಯಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಾಲೆ ಮಧ್ಯಾಹ್ನದವರೆಗೂ ನಿಷೇಧಾಜ್ಞೆ ಆದೇಶ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.