ಕೋಲಾರ: ಮೆಡಿಕಲ್ ಸ್ಟೋರ್ ಪರವಾನಗಿ ನವೀಕರಣಕ್ಕೆ ಅರ್ಜಿದಾರರಿಂದ ಲಂಚ ಸ್ವೀಕರಿಸುತ್ತಿದ್ದ ಕೋಲಾರ ಜಿಲ್ಲಾ ಔಷಧ ನಿಯಂತ್ರಣ ಅಧಿಕಾರಿ ಶ್ಯಾಮಲಾ ಸೇರಿದಂತೆ ಮೂವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಟೇಕಲ್ ಸಮೀಪ ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ ಕೃಷ್ಣ ಎಂಬುವವರು ಅರ್ಜಿ ಸಲ್ಲಿಸಿದ್ದರು. ನವೀಕರಣ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ಮಂಗಳವಾರ ಸಂಜೆ ಕಾರ್ಯಾಚರಣೆ ನಡೆಸಲಾಗಿದೆ. 35 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ. ಸಿಕ್ಕಿ ಬೀಳುವ ಭಯದಲ್ಲಿ ಶ್ಯಾಮಲಾ ಮತ್ತಿಬ್ಬರು ಕಾರ್ ನಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ಲಂಚದ ಹಣದ ವನ್ನು ಮಾರ್ಗಮಧ್ಯೆಯೇ ಎಸೆದಿದ್ದಾರೆ. ಕೂಡಲೇ ಅವರನ್ನು ಬೆನ್ನಟ್ಟಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

